PNG Gas: ಇನ್ಮುಂದೆ ಗ್ಯಾಸ್ ಸಿಲಿಂಡರ್ ಖಾಲಿ ಆಯಿತೆಂದು ಕಾಯುವ, ಭಾರವಾದ ಸಿಲಿಂಡರ್ ಹೊತ್ತು ತರುವ ಕಿರಿಕಿರಿ ಇರುವುದಿಲ್ಲ. ನಿಮ್ಮ ಮನೆಯ ನಲ್ಲಿಗಳಲ್ಲಿ ನೀರು ಬರುವಂತೆಯೇ ಅಡುಗೆ ಮನೆಗೂ ನೇರವಾಗಿ ಅನಿಲ ಹರಿಯುವ ಹೊಸ ಯುಗ ಆರಂಭವಾಗುತ್ತಿದೆ. ದೇಶಾದ್ಯಂತ ಸಾಂಪ್ರದಾಯಿಕ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಗುಡ್‌ಬೈ ಹೇಳಿ, ಸುರಕ್ಷಿತ ಹಾಗೂ ಅಗ್ಗದ ಪೈಪ್‌ಡ್ ನ್ಯಾಚುರಲ್ ಗ್ಯಾಸ್ ತಲುಪಿಸಲು ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ವೇಗ ನೀಡಿದೆ.
Author: sangitha G @
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಉಳವಿ ಶಾಖಾ ವ್ಯಾಪ್ತಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 19ರ ಬುಧವಾರದಂದು ಈ ಕೇಂದ್ರದಿಂದ ಸರಬರಾಜಾಗುವ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತ್ಯಪ್ರಕಾಶ್ ತಿಳಿಸಿದ್ದಾರೆ. ಶಿವಮೊಗ್ಗ: ನಾಳೆ 7 ಗಂಟೆ ವಿದ್ಯುತ್ ವ್ಯತ್ಯಯ! ಸೊರಬ ತಾಲೂಕಿನ ಉಳವಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಳವಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ. ದೂಗೂರು, ಭದ್ರಾಪುರ, ಬರಗಿ, ಹೊಳೇಕೊಪ್ಪ, ಅಮಟೆ, ಕಾನಳ್ಳಿ ಸೇರಿದಂತೆ ಹಲವು ಗ್ರಾಮಗಳು ಬಾಧಿತವಾಗಲಿವೆ. ಗ್ರಾಹಕರು ಗಮನಿಸಿ, ಇಲಾಖೆಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಮುಂದಿನ ಏಳು ದಿನಗಳೊಳಗೆ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಗೆ ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯಪಾಲರ ಆದೇಶಕ್ಕೆ ಹೈಕೋರ್ಟ್ ಬ್ರೇಕ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಇಂದು, ಆಗಸ್ಟ್ 18ರಂದು ಅಂತಿಮ ಆದೇಶ ಪ್ರಕಟಿಸಿದೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಜುಲೈ 10ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅಮಾನತು ಆದೇಶವನ್ನು ರಾಜ್ಯ ಸಚಿವ ಸಂಪುಟದ ಸೂಕ್ತ ಸಲಹೆ ಅಥವಾ ಶಿಫಾರಸಿನ ಆಧಾರದ ಮೇಲೆ ಕೈಗೊಂಡಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪುತ್ರಿಯ ನೇಮಕಾತಿ ವಿಚಾರದಲ್ಲಿ ಖಡಕ್ ಸೂಚನೆ ಸಾಹುಕಾರ್ ಅವರನ್ನು ಮತ್ತೆ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲು ಆದೇಶಿಸಿರುವ ನ್ಯಾಯಾಲಯ, ಪುತ್ರಿಯ ನೇಮಕಾತಿಗೆ ಸಂಬಂಧಿಸಿದ…