Author: The Prime Voice

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರನಿಗೆ ಬೆದರಿಕೆ ಹಾಕಿದ ಆರೋಪದಡಿ ನಟ ದರ್ಶನ್ ಅಭಿಮಾನಿ ಬಳಗಕ್ಕೆ ಸೇರಿದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ 49ನೇ ಸಾಕ್ಷಿಯಾಗಿರುವ ಸಂದೀಪ್ ಅವರಿಗೆ ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ಧ ಸಾಕ್ಷಿ ಹೇಳದಂತೆ ಒತ್ತಡ ಹೇರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾಕ್ಷಿದಾರ ಸಂದೀಪ್ ಅವರು ನ್ಯಾಯಾಲಯದ ಮುಂದೆ ಬೆದರಿಕೆ ಬಗ್ಗೆ ಹೇಳಿಕೆ ನೀಡುತ್ತಿದ್ದಂತೆಯೇ ಪೊಲೀಸರು ಎಚ್ಚೆತ್ತುಕೊಂಡು ಅವರಿಗೆ ಭದ್ರತೆ ಒದಗಿಸಿದ್ದರು. ಬಳಿಕ ವಿಶೇಷ ಕಾರ್ಯಾಚರಣೆ ನಡೆಸಿದ ಕಾಮಾಕ್ಷಿಪಾಳ್ಯ ಪೊಲೀಸರು ವೇಣು, ಸುಹಾಸ್ ಹಾಗೂ ಪುನೀತ್ ಎಂಬ ಮೂವರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಂಧಿತರ ಹಿನ್ನೆಲೆಯೂ ಬೆಳಕಿಗೆ ಬಂದಿದೆ. ಆರೋಪಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ‘ಡಿ ಕಂಪನಿ’ ಹೆಸರಿನ ದರ್ಶನ್ ಅಭಿಮಾನಿ ಫ್ಯಾನ್ ಪೇಜ್‌ನ್ನು ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಇನ್ನು ವೇಣು ಮತ್ತು ಸುಹಾಸ್ ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸಕ್ರಿಯ ಸದಸ್ಯರಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ತನಿಖೆ ಪ್ರಕಾರ,…

Read More

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಂಘದ ಅತ್ಯಂತ ಮಹತ್ವದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಆತಿಥ್ಯ ವಹಿಸುತ್ತಿದೆ. ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸಂಘದ ಉನ್ನತ ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಹರಿಯಾಣದ ಸಮಾಲ್ಖಾದಲ್ಲಿ ನಡೆದ ರಾಷ್ಟ್ರೀಯ ಸಭೆಯ ಬಳಿಕ ನಡೆಯುತ್ತಿರುವ ಈ ಸಭೆಗೆ ವಿಶೇಷ ಮಹತ್ವ ದೊರೆತಿದೆ. ದೇಶದ 46 ಪ್ರಾಂತಗಳ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಹಾಗೂ ಸಹ ಕ್ಷೇತ್ರ ಪ್ರಚಾರಕರು, ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳ ಪ್ರಮುಖರು ಸೇರಿದಂತೆ ನೂರಾರು ಹಿರಿಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳೂ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಕಾರ್ಯಯೋಜನೆ, ದೇಶಾದ್ಯಂತ ಶಾಖೆಗಳ ವಿಸ್ತರಣೆ, ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ದಿನಗಳ ರಾಷ್ಟ್ರೀಯ ಕಾರ್ಯಕ್ರಮಗಳ ಕುರಿತು ಮಹತ್ವದ…

Read More

ತಾವರೆಕೆರೆ: ಕ್ರಷರ್ ಬಂಡೆ ಕೆಲಸದ ವೇಳೆ ಭೀಕರ ದುರ್ಘಟನೆ ಸಂಭವಿಸಿ 7 ಕಾರ್ಮಿಕರು ಸಾವನ್ನಪ್ಪಿದ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಘಟಕದಲ್ಲಿ ಇಂದು ಬೆಳಿಗ್ಗೆ ಕೆಲಸ ನಡೆಯುತ್ತಿದ್ದ ವೇಳೆ ಮೇಲಿನಿಂದ ಬೃಹತ್ ಬಂಡೆ ಕುಸಿದು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಇಬ್ಬರು ಕಾರ್ಮಿಕರು ಬಂಡೆ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಟಾಚಿ ಯಂತ್ರದ ಮೂಲಕ ಕೆಲಸ ನಡೆಯುತ್ತಿದ್ದಾಗಲೇ ಮೇಲಿನ ಬಂಡೆ ಸಡಿಲಾಗಿ ಕುಸಿತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ನಿರೀಕ್ಷೆಯಲ್ಲಿವೆ.

Read More

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರು ಕೊಲೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಅಪ್ರಾಪ್ತ ಬಾಲಕರ ಮೇಲೆ ಅಮಾನವೀಯ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು (ಜೂ. 29): ಜನರ ರಕ್ಷಣೆಗಾಗಿ ನೇಮಕಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯದ ಹೆಸರಿನಲ್ಲಿ ಅಪ್ರಾಪ್ತ ಬಾಲಕರ ಮೇಲೆ ನಡೆಸಿದ ಅಮಾನವೀಯ ಹಾಗೂ ಅಸಭ್ಯ ವರ್ತನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಮೃತಹಳ್ಳಿ ಠಾಣೆಯ ಪಿಎಸ್‌ಐ ಪ್ರವೀಣ್ ವಿರುದ್ಧದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದಿರುವ ಘಟನೆ ಎಂದು ಪರಿಗಣಿಸಲಾಗಿದೆ. ಕೆಲವು ತಿಂಗಳ ಹಿಂದೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಯ ಸಂಬಂಧ ಕೆಲವು ಅಪ್ರಾಪ್ತ ಬಾಲಕರನ್ನು ವಿಚಾರಣೆಗೆ ಕರೆಸಲಾಗಿತ್ತು. ಆರೋಪದ ಪ್ರಕಾರ, ಅವರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುವ ಬದಲು…

Read More

ಮೇಕೆದಾಟು ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ, ಯಾವುದೇ ಕಾರಣಕ್ಕೂ ಈ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿ ವಿಧಾನಸಭೆಯಲ್ಲಿ ವಿಶೇಷ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ರಾಜ್ಯದ ಎಲ್ಲ ಪಕ್ಷಗಳೂ ಒಂದೇ ನಿಲುವು ತಾಳಿರುವುದು ಈ ನಿರ್ಣಯದಿಂದ ಸ್ಪಷ್ಟವಾಗಿದೆ. ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮೇಕೆದಾಟು ಅಣೆಕಟ್ಟು ವಿವಾದವನ್ನು ಪರಿಹರಿಸಲು ಪ್ರತ್ಯೇಕ ನ್ಯಾಯಮಂಡಳಿ (ಟ್ರಿಬ್ಯುನಲ್) ರಚಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಈ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಉದಯನಿಧಿ ಸ್ಟಾಲಿನ್ ಅವರ ಸಲಹೆಯನ್ನು ನಿರ್ಣಯದಲ್ಲಿ ಸೇರಿಸಲು ಮನವಿ ಮಾಡಿದರು. ಬಳಿಕ ತಿದ್ದುಪಡಿಯನ್ನು ಸೇರಿಸಿ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಇನ್ನೊಂದೆಡೆ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಅಣೆಕಟ್ಟು ಯೋಜನೆ ಕರ್ನಾಟಕಕ್ಕಷ್ಟೇ ಅಲ್ಲ, ತಮಿಳುನಾಡಿಗೂ…

Read More

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಪವನ್ ಒಡೆಯರ್ ಅವರ ತಾಯಿ ಗೀತಾ ಒಡೆಯರ್ (73) ನಿಧನರಾಗಿದ್ದಾರೆ. ಮಲ್ಟಿಪಲ್ ಮೈಲೋಮಾ (ರಕ್ತದ ಕ್ಯಾನ್ಸರ್) ಹಾಗೂ ಜಿಬಿ ಸಿಂಡ್ರೋಮ್‌ನಿಂದ ಬಳಲುತ್ತಿದ್ದ ಅವರು ಕಳೆದ ಎರಡು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗೀತಾ ಒಡೆಯರ್ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕ ಪವನ್ ಒಡೆಯರ್ ಅವರ ಕುಟುಂಬಕ್ಕೆ ಭರಿಸಲಾಗದ ದುಃಖ ಎದುರಾಗಿದೆ. ಪವನ್ ಒಡೆಯರ್ ಅವರ ತಾಯಿ ಗೀತಾ ಒಡೆಯರ್ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಗೀತಾ ಒಡೆಯರ್‌ ಬಳಲುತ್ತಿದ್ದರು. ಇಂದು (ಜೂನ್ 17) ಬೆಂಗಳೂರಿನಲ್ಲಿ ಗೀತಾ ಒಡೆಯರ್‌ ಕೊನೆಯುಸಿರೆಳೆದಿದ್ದಾರೆ. ಗೀತಾ ಒಡೆಯರ್ ಅವರಿಗೆ 73 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗೀತಾ ಒಡೆಯರ್ ಮೂಲಗಳ ಪ್ರಕಾರ, ಗೀತಾ ಒಡೆಯರ್ ಮಲ್ಟಿಪಲ್ ಮೈಲೋಮಾ (Multiple Myeloma) ಎಂಬ ಒಂದು ರೀತಿಯ ರಕ್ತದ ಕ್ಯಾನ್ಸರ್ ಹಾಗೂ ಜಿಬಿ ಸಿಂಡ್ರೋಮ್ (Guillain-Barré Syndrome) ಎಂಬ ಅಪರೂಪದ ನರ ಸಂಬಂಧಿತ ಕಾಯಿಲೆಯಿಂದ…

Read More

ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಪ್ರಮುಖ ಪರಿಹಾರವಾಗಿ ಗುರುತಿಸಲ್ಪಟ್ಟಿರುವ ನಮ್ಮ ಮೆಟ್ರೋದ ಹಳದಿ ಮಾರ್ಗ (ಎಲೆಕ್ಟ್ರಾನಿಕ್ ಸಿಟಿ ಮಾರ್ಗ)ಕ್ಕೆ ಮತ್ತೊಂದು ಹೊಸ ರೈಲು ಸೇರ್ಪಡೆಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸೋಮವಾರ 13ನೇ ಹೊಸ ರೈಲನ್ನು ಸ್ವಾಗತಿಸಿದ್ದು, ಈ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರು ಕೋಚ್‌ಗಳನ್ನು ಹೊಂದಿರುವ ಈ ಹೊಸ ಮೆಟ್ರೋ ರೈಲು ಸೋಮವಾರ ಹೆಬ್ಬಗೋಡಿ ಡಿಪೋಗೆ ತಲುಪಿದೆ. ಪ್ರಸ್ತುತ ಟ್ರೈಲರ್‌ಗಳ ಮೂಲಕ ತರಲಾಗಿರುವ ಕೋಚ್‌ಗಳನ್ನು ಕೆಳಗಿಳಿಸುವ ಕಾರ್ಯ ನಡೆಯುತ್ತಿದ್ದು, ನಂತರ ಅವುಗಳನ್ನು ಒಟ್ಟುಗೂಡಿಸಿ ಸ್ಟ್ಯಾಟಿಕ್ ಟೆಸ್ಟಿಂಗ್‌ಗಾಗಿ ಇನ್ಸ್‌ಪೆಕ್ಷನ್ ಬೇ ಲೈನ್‌ (IBL)ಗೆ ಕೊಂಡೊಯ್ಯಲಾಗುತ್ತದೆ. ಸಾರ್ವಜನಿಕ ಸೇವೆಗೆ ಮುನ್ನ ರೈಲು ಮುಖ್ಯ ಮಾರ್ಗದಲ್ಲಿ ಸುಮಾರು 750 ಕಿಲೋಮೀಟರ್‌ಗಳ ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕಿದೆ. ಮೆಟ್ರೋ ಕಾರ್ಯಾಚರಣೆಗೆ ಯಾವುದೇ ಅಡಚಣೆ ಉಂಟಾಗದಂತೆ ಈ ಪರೀಕ್ಷಾ ಪ್ರಕ್ರಿಯೆಯನ್ನು ರಾತ್ರಿ ವೇಳೆಯಲ್ಲಷ್ಟೇ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 11ರಂದು ಹಳದಿ ಮಾರ್ಗದ ಮೊದಲ ವಾರ್ಷಿಕೋತ್ಸವದ ವೇಳೆಗೆ ಎಲ್ಲಾ 15 ರೈಲುಗಳನ್ನು…

Read More

ಬೆಂಗಳೂರು: ಕಾಡುಗೋಡಿಯ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮೃತ ಬಾಲಕಿಯ ತಾಯಿ ಪ್ರಿಯಾಂಕಾ ವಿರುದ್ಧದ ಅನುಮಾನಗಳು ಇನ್ನಷ್ಟು ಗಾಢವಾಗಿವೆ. ಪ್ರಕರಣದ ಸತ್ಯಾಸತ್ಯತೆ ಹೊರತೆಗೆದುಬರುವ ಉದ್ದೇಶದಿಂದ ಪ್ರಿಯಾಂಕಾಗೆ ಪಾಲಿಗ್ರಾಫ್ (ಸುಳ್ಳುಪತ್ತೆ) ಪರೀಕ್ಷೆ ನಡೆಸಲು ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ. ಇದೇ ವೇಳೆ, ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣದ ಆರೋಪಿಗಳಾದ ಮೋಹನ್ ಮತ್ತು ಪ್ರಿಯಾಂಕಾರನ್ನು ಬಾಣಸವಾಡಿ ಎಸಿಪಿ ಅನುಷಾ ನೇತೃತ್ವದ ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. ತನಿಖೆಯನ್ನು ಮುಂದುವರಿಸಲು ಹಾಗೂ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಲು ಪೊಲೀಸ್ ಕಸ್ಟಡಿ ಅಗತ್ಯವಿದೆ ಎಂದು ಮನವಿ ಸಲ್ಲಿಸಲಾಗಿತ್ತು. ಮನವಿಯನ್ನು ಪರಿಗಣಿಸಿದ ಒಂದನೇ ಎಸಿಜೆಎಂ ನ್ಯಾಯಾಲಯ, ಆರೋಪಿ ಮೋಹನ್‌ಗೆ ಐದು ದಿನ ಹಾಗೂ ಪ್ರಿಯಾಂಕಾಗೆ ಹತ್ತು ದಿನಗಳ ಪೊಲೀಸ್ ಕಸ್ಟಡಿ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈಗಾಗಲೇ ತನಿಖೆ ವೇಳೆ ಆರೋಪಿ ಮೋಹನ್ ಕೊಲೆ ಕೃತ್ಯದ ಕುರಿತು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು…

Read More

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ರೈತರಿಗೆ ಬಂಪರ್ ಘೋಷಣೆ ಮಾಡಿದ್ದು, ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ₹75,000 ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಪರಿಷ್ಕೃತ ಯೋಜನೆಯ ಪ್ರಕಾರ, 2025ರ ಮೇ 1ರಿಂದ 2026ರ ಫೆಬ್ರವರಿ 28ರ ನಡುವೆ ಸಹಕಾರಿ ಬ್ಯಾಂಕುಗಳಿಂದ ಪಡೆದ ₹75,000 ವರೆಗಿನ ಬೆಳೆ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ. ಅದಕ್ಕಿಂತ ಹೆಚ್ಚು ಸಾಲ ಪಡೆದ ರೈತರಿಗೆ ₹35,000 ವರೆಗೆ ಮನ್ನಾ ಸೌಲಭ್ಯ ದೊರೆಯಲಿದೆ. ಈ ಯೋಜನೆಯಿಂದ ರಾಜ್ಯಾದ್ಯಂತ ಸುಮಾರು 14.43 ಲಕ್ಷಕ್ಕೂ ಹೆಚ್ಚು ರೈತರು ನೇರ ಪ್ರಯೋಜನ ಪಡೆಯಲಿದ್ದಾರೆ. ಇದರಲ್ಲಿ 6.22 ಲಕ್ಷ ರೈತರು ಸಂಪೂರ್ಣ ಸಾಲ ಮನ್ನಾ ಪಡೆಯಲಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಯೋಜನೆಯಿಂದ ಸರ್ಕಾರಕ್ಕೆ ಸುಮಾರು ₹5,932.23 ಕೋಟಿ ಆರ್ಥಿಕ ಭಾರ ಬೀಳಲಿದೆ. ಸಹಕಾರಿ ಬ್ಯಾಂಕುಗಳಿಗೆ ಸಂಬಂಧಿಸಿದ ಪಾವತಿಗಳನ್ನು RBI ಮಾರ್ಗಸೂಚಿಗಳಂತೆ 45 ರಿಂದ 60 ದಿನಗಳೊಳಗೆ ಇತ್ಯರ್ಥಪಡಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

Read More

ಮೈಸೂರು: ನಗರದ ರಿಂಗ್ ರಸ್ತೆಯಲ್ಲಿರುವ ಫಾಕ್ಸ್ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿರುವ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಮೇಲ್ಮಹಡಿಗೆ ವ್ಯಾಪಿಸಿದೆ. ಪಬ್ ಒಳಾಂಗಣದಲ್ಲಿ ಮರದ ವಸ್ತುಗಳು ಹಾಗೂ ಒಣ ಹುಲ್ಲು ಅಲಂಕಾರ ಬಳಸಲಾಗಿದ್ದರಿಂದ ಬೆಂಕಿ ವೇಗವಾಗಿ ಹರಡಿದೆ ಎಂದು ತಿಳಿದುಬಂದಿದೆ. ಲೈಸೆನ್ಸ್ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೇ ಪಬ್ ಕಾರ್ಯಾಚರಣೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಫೈರ್ ಎಕ್ಸಿಟ್ ಹಾಗೂ ಅಗ್ನಿಶಾಮಕ ಸಿಲಿಂಡರ್‌ಗಳ ಕೊರತೆಯೂ ಕಂಡುಬಂದಿದೆ. ಘಟನೆಯಲ್ಲಿ ಡಾರ್ಜಿಲಿಂಗ್ ಮೂಲದ ಸಾಹಿನ್ ಹಾಗೂ ನೇಪಾಳ ಮೂಲದ ಪ್ರಕಾಶ್ ಮೃತಪಟ್ಟಿದ್ದಾರೆ. ಸೋನು, ರಮೇಶ್, ಮಹದೇವ ಪ್ರಸಾದ್, ಪ್ರಜ್ವಲ್ ಸೇರಿದಂತೆ ಹಲವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More