ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಗು ವೆನ್ನಿಲಾ ಕೊಲೆ ಪ್ರಕರಣ ಸಂಬಂಧ ಹಲವು ಹೊಸ ಮಾಹಿತಿಗಳು ಬೆಳಕಿಗೆ ಬರುತ್ತಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ. ಖಾಸಗಿ ವಿಲ್ಲಾದಲ್ಲಿ ಬಾಡಿಗೆಗೆ ವಾಸವಾಗಿದ್ದ ಮೋಹನ್ ಮತ್ತು ಪ್ರಿಯಾಂಕ ನಡುವೆ ಇದ್ದ ಸಂಬಂಧ ಹಾಗೂ ವೈಯಕ್ತಿಕ ಕಲಹಗಳು ಈ ಘಟನೆಗೆ ಹಿನ್ನೆಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ, ಪ್ರಿಯಾಂಕ ಅವರ ಜೀವನದಲ್ಲಿ ಪುನಃ ಪ್ರವೇಶ ಪಡೆದ ನಂತರ ಮೋಹನ್ ಅವರು ಕಳೆದ ಜನವರಿಯಲ್ಲಿ ಕಾಡುಗೋಡಿಯ ಚಿಕ್ಕಬನಹಳ್ಳಿ ರಸ್ತೆಯಲ್ಲಿರುವ ವಿಲ್ಲಾಕ್ಕೆ ಸ್ಥಳಾಂತರಗೊಂಡಿದ್ದರು. ನವೆಂಬರ್‌ನಲ್ಲಿ ಇಬ್ಬರ ನಡುವೆ ಮತ್ತೆ ಪರಿಚಯವಾಗಿದ್ದು, ನಂತರ ಡಿಸೆಂಬರ್ ಕೊನೆ ವಾರದಲ್ಲಿ ಇಬ್ಬರೂ ಕಾಶಿಗೆ ತೆರಳಿ ವಾಪಸ್ ಬಂದಿದ್ದರು ಎಂದು ತಿಳಿದು ಬಂದಿದೆ. ಜನವರಿ 13ರಂದು ವೈವಾಹಿಕ ಸಂಬಂಧ ಸಂಬಂಧಿತ ವಿಚಾರದಲ್ಲಿ ಕೋರ್ಟ್‌ನಲ್ಲಿ ಡೈವರ್ಸ್ ಪ್ರಕ್ರಿಯೆಗೂ ಅರ್ಜಿ ಸಲ್ಲಿಕೆಯಾಗಿದ್ದರೂ, ಗಂಡ ಪ್ರವೀಣ್ ಸಹಿ ಹಾಕಲು ನಿರಾಕರಿಸಿದ್ದಾನೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಬಳಿಕ ಮಕ್ಕಳ ವಿಚಾರವನ್ನು ಮುಂದಿಟ್ಟು ಸಹಿ ಪಡೆದುಕೊಳ್ಳಲಾಗಿತ್ತು ಎಂಬುದು ತನಿಖೆಯಲ್ಲಿ ತಿಳಿದು…
Author: The Prime Voice
ಮಂಡ್ಯ: ಲಂಚ ಸ್ವೀಕರಿಸುತ್ತಿದ್ದ ವೇಳೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಶಿವಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಗೌಡ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಠಾಣಾ ಮಟ್ಟದಲ್ಲೇ ಜಾಮೀನು (Station Bail) ನೀಡಿ ಪ್ರಕರಣ ಇತ್ಯರ್ಥಗೊಳಿಸುವುದಾಗಿ ಹೇಳಿ ASI ಶಿವಕುಮಾರ್ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಆರೋಪಿಯ ಕುಟುಂಬದವರು ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದು, ಲಂಚದ ಬೇಡಿಕೆಗೆ ಸಂಬಂಧಿಸಿದ ದೂರವಾಣಿ ಸಂಭಾಷಣೆಯನ್ನು ಸಹ ದಾಖಲಿಸಿ ಸಾಕ್ಷ್ಯವಾಗಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬುಧವಾರ ರಾತ್ರಿ ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲೇ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ASI ಶಿವಕುಮಾರ್ ಅವರನ್ನು ರೆಡ್‌ಹ್ಯಾಂಡಾಗಿ ಬಂಧಿಸಿದ್ದಾರೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಲೇಪಾಕ್ಷಮೂರ್ತಿ ಹಾಗೂ ಬ್ಯಾಟರಾಯಗೌಡ ನೇತೃತ್ವದಲ್ಲಿ ಈ ದಾಳಿ ಕಾರ್ಯಾಚರಣೆ ನಡೆದಿದ್ದು, ಬಂಧಿತ ASIಯನ್ನು ವಶಕ್ಕೆ ಪಡೆದು ಹೆಚ್ಚಿನ…
ಓಸ್ಲೋ: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ನಾರ್ವೆ ಚೆಸ್ 2026 ಟೂರ್ನಿಯ ಚಾಂಪಿಯನ್ ಆಗಿ ಹೊಸ ದಾಖಲೆ ಬರೆದಿದ್ದಾರೆ. ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ ಸುತ್ತಿನಲ್ಲಿ ಗೆಲುವು ಸಾಧಿಸಿದ ಅವರು, ನಾರ್ವೆ ಚೆಸ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 20 ವರ್ಷದ ಚೆನ್ನೈ ಮೂಲದ ಪ್ರಜ್ಞಾನಂದ, ಆರಂಭದಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಕೊನೆಯ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಈ ಮೂಲಕ ವಿಶ್ವನಾಥನ್ ಆನಂದ್, ಡಿ. ಗುಕೇಶ್ ಹಾಗೂ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಸೇರಿದಂತೆ ಹಲವು ಪ್ರಮುಖ ಆಟಗಾರರನ್ನು ಹಿಂದಿಕ್ಕಿದರು. ಅಮೆರಿಕದ ವೆಸ್ಲಿ ಸೊ ಟೈ-ಬ್ರೇಕರ್‌ನಲ್ಲಿ ಗೆದ್ದರೂ ಒಟ್ಟು 17 ಅಂಕಗಳಿಗೆ ಸೀಮಿತರಾದರೆ, ಅಲಿರೇಝಾ ಫೀರೋಝ್‌ಜಾ ಮೂರನೇ ಸ್ಥಾನ ಪಡೆದರು. ಹಾಲಿ ಚಾಂಪಿಯನ್ ಗುಕೇಶ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಕಾರಣ, ಪ್ರಜ್ಞಾನಂದ ಚಾಂಪಿಯನ್ ಪಟ್ಟ ಅಲಂಕರಿಸಿ ಭಾರತದ ಕೀರ್ತಿ ಹೆಚ್ಚಿಸಿದರು.
ಹೊಸದಿಲ್ಲಿ: ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸಿ, ಕಾಕ್ರೋಚ್ ಜನತಾ ಪಾರ್ಟಿ ವತಿಯಿಂದ ದಿಲ್ಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಪಕ್ಷದ ನಾಯಕ ಅಭಿಜೀತ್ ದಿಪ್ಕೆ ತಮ್ಮ ಬೆಂಬಲಿಗರೊಂದಿಗೆ ಭಾಗವಹಿಸಿದರು. ಶನಿವಾರ ಬೆಳಿಗ್ಗೆ ದಿಲ್ಲಿಗೆ ತಲುಪಿದ ದಿಪ್ಕೆ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರು ಶಾಂತಿ ಮತ್ತು ಶಿಸ್ತು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೂ ಮುನ್ನ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದ ಮೂಲಕವೂ ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದರು.
ಜೂನ್ 5: ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕೆ ₹5 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ದೂರುದಾರ ಬೆಳತೂರು ಪರಮೇಶ್ ರಿಂದ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಆರೋಪಿಗಳೊಂದಿಗೆ ಮಾತುಕತೆ ನಡೆದಿದ್ದು, ಮೊದಲ ಕಂತುವಾಗಿ ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ದಾಖಲೆಗಳು ಮತ್ತು ಇತರೆ ಸಾಕ್ಷ್ಯಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ರಾಜ್ಯದಲ್ಲಿ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಲೋಕಾಯುಕ್ತ, ಸಾರ್ವಜನಿಕರು ಲಂಚ ಬೇಡಿಕೆ…
ಬೆಂಗಳೂರು ಜೂನ್ 5: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ನೀಡುವುದಾಗಿ ಎರಡು ಬಾರಿ ಭರವಸೆ ನೀಡಿದ್ದರೂ ಅದನ್ನು ಕಾರ್ಯರೂಪಕ್ಕೆ ತರದಿರುವುದು ತಮ್ಮ ನಿರಾಸೆ ಮತ್ತು ಬೇಸರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ತಮಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಿಂದ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ತಾವು, ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ನಿರೀಕ್ಷಿಸಿದ್ದಾಗಿ ತಿಳಿಸಿ, ಅದನ್ನು ನೀಡದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಬೆಂಗಳೂರು, ಜೂನ್ 4: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ನೆರವು ಒದಗಿಸಲು ರಾಜ್ಯದಾದ್ಯಂತ ಹೆಲ್ಪ್ ಡೆಸ್ಕ್‌ಗಳನ್ನು ಸ್ಥಾಪಿಸುವಂತೆ ಅವರು ಆದೇಶಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ ಹಾಗೂ ಜನಸ್ನೇಹಿ ರೀತಿಯಲ್ಲಿ ನಡೆಯಬೇಕು ಎಂದು ಹೇಳಿದರು. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈತಪ್ಪದಂತೆ ಅಧಿಕಾರಿಗಳು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಎಸ್‌ಐಆರ್ ಸಂಬಂಧಿತ ಪ್ರಶ್ನೆಗಳು ಹಾಗೂ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಗತ್ಯವಿರುವ ಸ್ಥಳಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯುವಂತೆ ಅವರು ತಿಳಿಸಿದರು. ಜೊತೆಗೆ ಈ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ವಿಶೇಷ ಅಧಿಕಾರಿಗಳ ತಂಡವನ್ನು ರಚಿಸಲು ಸೂಚಿಸಿದರು. ಜಿಲ್ಲಾವಾರು ಸಮಸ್ಯೆಗಳ ಪಟ್ಟಿ…
ಬೆಂಗಳೂರು, ಜೂನ್ 4: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಆರು ಮಹತ್ವದ ಯೋಜನೆಗಳನ್ನು ಘೋಷಿಸಿ ಗಮನ ಸೆಳೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದೀಗ ರಾಜ್ಯದ ಜನತೆಗೆ ಮತ್ತೊಂದು ಮಹತ್ವದ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಪರಿಣಾಮಕಾರಿ ನಿರ್ವಹಣೆಗಾಗಿ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಈ ಸಚಿವಾಲಯದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ ಮುಖ್ಯಮಂತ್ರಿ, ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಹಾಗೂ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಬೇಕು ಎಂದು ನಿರ್ದೇಶನ ನೀಡಿದರು. ಇದೇ ವೇಳೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಗುಣಮಟ್ಟದ…
ರಸ್ತೆಯಲ್ಲಿ ಹಲ್ಲೆ (ರೋಡ್ ರೇಜ್) ಪ್ರಕರಣದ ಸಂಬಂಧ ದೂರು ನೀಡಲು ತೆರಳಿದ್ದ ಮಹಿಳಾ ವಕೀಲೆ ಠಾಣೆಯಲ್ಲಿ ದಾಂದಲೆ ಎಬ್ಬಿಸಿದ್ದಾರೆ ಎಂದು ಬೂಟಿನ ಕಾಲಿನಲ್ಲಿ ಒದ್ದ ಮಹಿಳಾ ಪೊಲೀಸ್ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ. ಬೆಂಗಳೂರಿನ ನಬೋನಿತಾ ಸೇನ್ ಅವರು ತಮ್ಮ ವಿರುದ್ಧ ಮೈಕೊ ಲೇಔಟ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು. “ಟೇಬಲ್ ಮೇಲಿನ ಕೆಲವು ದಾಖಲೆಗಳನ್ನು ಅರ್ಜಿದಾರೆ ಎಳೆದು ಬಿಸಾಡಿದರು ಎಂಬ ಕಾರಣಕ್ಕೆ ಪದ್ಮಾವತಿ ಅವರು ಸಕಾರಣವಿಲ್ಲದೇ ಬೂಟಿನ ಕಾಲಿನಲ್ಲಿ ಒದ್ದಿದ್ದಾರೆ ಎಂಬುದು ಠಾಣೆಯ ಸಿಸಿಟಿವಿ ದೃಶ್ಯಾವಳಿಯಿಂದ ಖಾತರಿಯಾಗಿದೆ. ಅದರೂ ಪದ್ಮಾವತಿ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಹೀಗಾಗಿ, ಇಂಥ ಕೃತ್ಯ ಎಸಗಿದ ಅಧಿಕಾರಿಗೆ ಇಲಾಖಾ ವಿಚಾರಣೆಯ ಮೂಲಕ ಎಚ್ಚರಿಕೆ ನೀಡುವುದಲ್ಲ, ಅವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು” ಎಂದು ಆದೇಶಿಸಿದೆ. ಅಲ್ಲದೇ, ವಕೀಲೆಯ ವಿರುದ್ಧದ ಪ್ರಕರಣಕ್ಕೂ…
ಭಾರತವು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ವೇಗವಾಗಿ ಸಾಗುತ್ತಿರುವ ಈ ಕಾಲಘಟ್ಟದಲ್ಲಿ, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ದೊಡ್ಡ ಹೆಜ್ಜೆಯನ್ನು ಇಟ್ಟಿದೆ. ಪ್ರಧಾನಮಂತ್ರಿ Narendra Modi ಅವರು ಗುಜರಾತ್‌ನಲ್ಲಿ ₹3,300 ಕೋಟಿ ಮೌಲ್ಯದ ಸೆಮಿಕಂಡಕ್ಟರ್ ಘಟಕ ಯೋಜನೆಗೆ ಚಾಲನೆ ನೀಡಿರುವುದು ದೇಶದ ತಾಂತ್ರಿಕ ಭವಿಷ್ಯಕ್ಕೆ ಮಹತ್ವದ ತಿರುವಾಗಿದೆ.