ಹೊಸದಿಲ್ಲಿ: ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸಿ, ಕಾಕ್ರೋಚ್ ಜನತಾ ಪಾರ್ಟಿ ವತಿಯಿಂದ ದಿಲ್ಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಪಕ್ಷದ ನಾಯಕ ಅಭಿಜೀತ್ ದಿಪ್ಕೆ ತಮ್ಮ ಬೆಂಬಲಿಗರೊಂದಿಗೆ ಭಾಗವಹಿಸಿದರು.
ಶನಿವಾರ ಬೆಳಿಗ್ಗೆ ದಿಲ್ಲಿಗೆ ತಲುಪಿದ ದಿಪ್ಕೆ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರು ಶಾಂತಿ ಮತ್ತು ಶಿಸ್ತು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೂ ಮುನ್ನ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದ ಮೂಲಕವೂ ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದರು.
