ಬೆಂಗಳೂರು: ಲಿವ್‌-ಇನ್‌ ಸಂಬಂಧದಲ್ಲಿದ್ದ ಯುವತಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ನಗರದ ಮಲ್ಲೇಶ್ವರದಲ್ಲಿ ಬೆಳಕಿಗೆ ಬಂದಿದೆ. ಮೃತಳನ್ನು 20 ವರ್ಷದ ಅನುಷಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷದ ಶರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಮೂಲದ ಅನುಷಾ ಮತ್ತು ಶರತ್‌ ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯವಾಗಿದ್ದು, ಕಳೆದ ಆರು ತಿಂಗಳಿಂದ ಮಲ್ಲೇಶ್ವರದಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ವಾಟರ್‌ ಟ್ಯಾಂಕರ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶರತ್‌ ಮತ್ತು ಅನುಷಾ ನಡುವೆ ವೈಯಕ್ತಿಕ ಕಾರಣಗಳಿಂದ ಪದೇ ಪದೇ ಕಲಹ ಉಂಟಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಶನಿವಾರ ರಾತ್ರಿ ನಡೆದ ಜಗಳ ತಾರಕಕ್ಕೇರಿ, ಶರತ್‌ ಅನುಷಾಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಸೋಮವಾರ ಶರತ್‌ ತನ್ನ ವಕೀಲರಿಗೆ ವಿಷಯ ತಿಳಿಸಿದ್ದಾನೆ. ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಶೇಷಾದ್ರಿಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮೃತ ಅನುಷಾಳ ಮೃತದೇಹವನ್ನ ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Share.
Leave A Reply

Exit mobile version