ಮೈಸೂರು: ನಗರದ ರಿಂಗ್ ರಸ್ತೆಯಲ್ಲಿರುವ ಫಾಕ್ಸ್ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿರುವ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಮೇಲ್ಮಹಡಿಗೆ ವ್ಯಾಪಿಸಿದೆ. ಪಬ್ ಒಳಾಂಗಣದಲ್ಲಿ ಮರದ ವಸ್ತುಗಳು ಹಾಗೂ ಒಣ ಹುಲ್ಲು ಅಲಂಕಾರ ಬಳಸಲಾಗಿದ್ದರಿಂದ ಬೆಂಕಿ ವೇಗವಾಗಿ ಹರಡಿದೆ ಎಂದು ತಿಳಿದುಬಂದಿದೆ.

ಲೈಸೆನ್ಸ್ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೇ ಪಬ್ ಕಾರ್ಯಾಚರಣೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಫೈರ್ ಎಕ್ಸಿಟ್ ಹಾಗೂ ಅಗ್ನಿಶಾಮಕ ಸಿಲಿಂಡರ್‌ಗಳ ಕೊರತೆಯೂ ಕಂಡುಬಂದಿದೆ.

ಘಟನೆಯಲ್ಲಿ ಡಾರ್ಜಿಲಿಂಗ್ ಮೂಲದ ಸಾಹಿನ್ ಹಾಗೂ ನೇಪಾಳ ಮೂಲದ ಪ್ರಕಾಶ್ ಮೃತಪಟ್ಟಿದ್ದಾರೆ. ಸೋನು, ರಮೇಶ್, ಮಹದೇವ ಪ್ರಸಾದ್, ಪ್ರಜ್ವಲ್ ಸೇರಿದಂತೆ ಹಲವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Share.
Leave A Reply

Exit mobile version