ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಉಳವಿ ಶಾಖಾ ವ್ಯಾಪ್ತಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 19ರ ಬುಧವಾರದಂದು ಈ ಕೇಂದ್ರದಿಂದ ಸರಬರಾಜಾಗುವ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತ್ಯಪ್ರಕಾಶ್ ತಿಳಿಸಿದ್ದಾರೆ.
ಶಿವಮೊಗ್ಗ: ನಾಳೆ 7 ಗಂಟೆ ವಿದ್ಯುತ್ ವ್ಯತ್ಯಯ!
ಸೊರಬ ತಾಲೂಕಿನ ಉಳವಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಳವಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ.
ದೂಗೂರು, ಭದ್ರಾಪುರ, ಬರಗಿ, ಹೊಳೇಕೊಪ್ಪ, ಅಮಟೆ, ಕಾನಳ್ಳಿ ಸೇರಿದಂತೆ ಹಲವು ಗ್ರಾಮಗಳು ಬಾಧಿತವಾಗಲಿವೆ.
ಗ್ರಾಹಕರು ಗಮನಿಸಿ, ಇಲಾಖೆಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
