ನವದೆಹಲಿ: ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ (Telegram) ಮೇಲಿನ ನಿರ್ಬಂಧಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ದಿಢೀರ್ ನಿರ್ಧಾರದ ಹಿಂದೆ ಮಹತ್ವದ ಕಾರಣವಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸಿಗದಂತೆ ತಡೆಯುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.
ದೇಶದಲ್ಲಿ ಜೂನ್ 22ರವರೆಗೆ ನೀಟ್ (NEET) ಮರುಪರೀಕ್ಷೆ ನಡೆಯಲಿರುವ ಹಿನ್ನೆಲೆ, ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಗೆ ಅಡ್ಡಿಯಾಗುವ ಯಾವುದೇ ಕೃತ್ಯಗಳನ್ನು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ತ್ವರಿತ ಸಂದೇಶ ರವಾನೆಗೆ ಪ್ರಸಿದ್ಧವಾಗಿರುವ ಟೆಲಿಗ್ರಾಮ್ ಆ್ಯಪ್‌ನಲ್ಲಿ ಕಳೆದ ಬಾರಿಯೂ ನೀಟ್ ಪ್ರಶ್ನೆಪತ್ರಿಕೆಗಳು ವ್ಯಾಪಕವಾಗಿ ಹರಿದಾಡಿದ್ದವು. ಹೀಗಾಗಿ ಈ ಬಾರಿ ಯಾವುದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಜೂನ್ 22ರವರೆಗೆ ಟೆಲಿಗ್ರಾಮ್ ಆ್ಯಪ್‌ಗೆ ನಿರ್ಬಂಧ ಹೇರಿದೆ. ಅಲ್ಲದೆ, ಜೂನ್ 30ರವರೆಗೆ ಟೆಲಿಗ್ರಾಮ್‌ನಲ್ಲಿ ಸಂದೇಶ ಕಳುಹಿಸುವ ಸೌಲಭ್ಯವನ್ನು ಸಹ ನಿಷ್ಕ್ರಿಯಗೊಳಿಸಲಾಗಿದೆ.
