Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Crime»ವೆನ್ನಿಲಾ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್: ಪ್ರಿಯಾಂಕಾಳಿಗೆ ಪಾಲಿಗ್ರಾಫ್ ಟೆಸ್ಟ್‌ಗೆ ನಡೆಸಲು ಸಿದ್ಧತೆ!
    Crime

    ವೆನ್ನಿಲಾ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್: ಪ್ರಿಯಾಂಕಾಳಿಗೆ ಪಾಲಿಗ್ರಾಫ್ ಟೆಸ್ಟ್‌ಗೆ ನಡೆಸಲು ಸಿದ್ಧತೆ!

    The Prime VoiceBy The Prime VoiceJune 16, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು: ಕಾಡುಗೋಡಿಯ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮೃತ ಬಾಲಕಿಯ ತಾಯಿ ಪ್ರಿಯಾಂಕಾ ವಿರುದ್ಧದ ಅನುಮಾನಗಳು ಇನ್ನಷ್ಟು ಗಾಢವಾಗಿವೆ. ಪ್ರಕರಣದ ಸತ್ಯಾಸತ್ಯತೆ ಹೊರತೆಗೆದುಬರುವ ಉದ್ದೇಶದಿಂದ ಪ್ರಿಯಾಂಕಾಗೆ ಪಾಲಿಗ್ರಾಫ್ (ಸುಳ್ಳುಪತ್ತೆ) ಪರೀಕ್ಷೆ ನಡೆಸಲು ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ. ಇದೇ ವೇಳೆ, ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

    ಪ್ರಕರಣದ ಆರೋಪಿಗಳಾದ ಮೋಹನ್ ಮತ್ತು ಪ್ರಿಯಾಂಕಾರನ್ನು ಬಾಣಸವಾಡಿ ಎಸಿಪಿ ಅನುಷಾ ನೇತೃತ್ವದ ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. ತನಿಖೆಯನ್ನು ಮುಂದುವರಿಸಲು ಹಾಗೂ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಲು ಪೊಲೀಸ್ ಕಸ್ಟಡಿ ಅಗತ್ಯವಿದೆ ಎಂದು ಮನವಿ ಸಲ್ಲಿಸಲಾಗಿತ್ತು. ಮನವಿಯನ್ನು ಪರಿಗಣಿಸಿದ ಒಂದನೇ ಎಸಿಜೆಎಂ ನ್ಯಾಯಾಲಯ, ಆರೋಪಿ ಮೋಹನ್‌ಗೆ ಐದು ದಿನ ಹಾಗೂ ಪ್ರಿಯಾಂಕಾಗೆ ಹತ್ತು ದಿನಗಳ ಪೊಲೀಸ್ ಕಸ್ಟಡಿ ಮಂಜೂರು ಮಾಡಿ ಆದೇಶ ಹೊರಡಿಸಿದೆ.

    ಈಗಾಗಲೇ ತನಿಖೆ ವೇಳೆ ಆರೋಪಿ ಮೋಹನ್ ಕೊಲೆ ಕೃತ್ಯದ ಕುರಿತು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 24ರಂದು ಇಂದಿರಾನಗರದಲ್ಲಿ ಶಾಪಿಂಗ್‌ಗೆ ತೆರಳಿದ್ದ ವೇಳೆ ಐಸ್‌ಕ್ರೀಮ್ ವಿಚಾರವಾಗಿ ಬಾಲಕಿ ಅಳುತ್ತಿದ್ದ ಕಾರಣ ಕೋಪಗೊಂಡು ಆಕೆಯ ಹೊಟ್ಟೆಗೆ ಒದ್ದು, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

    ಆದರೆ ಸಹಆರೋಪಿ ಪ್ರಿಯಾಂಕಾ ಮಾತ್ರ ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ತನ್ನ ಮಗಳ ಕೊಲೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾಳೆ. ತನ್ನ ವಿರುದ್ಧದ ಆರೋಪಗಳು ಸುಳ್ಳು ಎಂದು ಹೇಳಿರುವ ಆಕೆಯ ಹೇಳಿಕೆಯಲ್ಲಿ ವ್ಯತ್ಯಾಸಗಳಿರುವ ಶಂಕೆಯಿಂದ ಪೊಲೀಸರು ವೈಜ್ಞಾನಿಕ ತನಿಖೆಯ ಮೊರೆ ಹೋಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಪ್ರಿಯಾಂಕಾಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳು ನಡೆಯುತ್ತಿವೆ. ಪರೀಕ್ಷೆಗೆ ಆಕೆ ಸಮ್ಮತಿ ನೀಡಿರುವುದಾಗಿ ತಿಳಿದುಬಂದಿದ್ದು, ಇದಕ್ಕಾಗಿ ಅಗತ್ಯ ಕಾನೂನು ಹಾಗೂ ನ್ಯಾಯಾಲಯದ ಅನುಮತಿ ಪಡೆಯುವ ಪ್ರಕ್ರಿಯೆಯನ್ನೂ ಪೊಲೀಸರು ಆರಂಭಿಸಿದ್ದಾರೆ. ಪ್ರಕರಣದ ತನಿಖೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಹತ್ವದ ಬೆಳವಣಿಗೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

    Post Views: 256
    Bengaluru crime news Bengaluru Murder Case Breaking News Kannada Child Murder Case Crime News Kannada Crime Update Forensic Investigation High Profile Murder Case Kannada news Karnataka crime news Karnataka Police Latest Crime Update Lie Detector Test Murder Investigation Police Investigation Polygraph Examination Priyanka Interrogation Priyanka Polygraph Test Priyanka Statement The Prime Voice Vennila Case Latest Update Vennila Case Twist Vennila Murder Case Vennila Murder Mystery Viral News Kannada ಪ್ರಿಯಾಂಕಾ ಪಾಲಿಗ್ರಾಫ್ ಟೆಸ್ಟ್ ವೆನ್ನಿಲಾ ಕೊಲೆ ಕೇಸ್ ವೆನ್ನಿಲಾ ಹತ್ಯೆ ಪ್ರಕರಣ ಸುಳ್ಳುಪತ್ತೆ ಪರೀಕ್ಷೆ
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್

    July 2, 2026

    ವೈರಲ್ ವಿಡಿಯೋದಿಂದ ಬಯಲಾಯ್ತು ಪಿಎಸ್‌ಐನ ವಿಕೃತ ಕೃತ್ಯ; ಪೋಕ್ಸೋ ಅಡಿಯಲ್ಲಿ ಬಂಧನ

    June 30, 2026

    “ನ್ಯಾಯದ ದಾರಿಯಲ್ಲೇ ಅನ್ಯಾಯದ ಆಟ – 20 ಲಕ್ಷ ರೂ. ಸುಲಿಗೆ ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರ ವಿರುದ್ಧ ಪ್ರಕರಣ ಬಯಲು!”

    June 19, 2026
    Leave A Reply Cancel Reply

    Recent Posts

    • ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್
    • ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ
    • ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!
    • ಬಿಡದಿ ಮೆಗಾ ಟೌನ್‌ಶಿಪ್‌ಗೆ ಹೈಕೋರ್ಟ್ ಕಂಟಕ: ಸರ್ಕಾರದ ಯೋಜನೆಗೆ ಆರಂಭದಲ್ಲೇ ತಣ್ಣೀರೆರಚಿದ ಪಿಐಎಲ್!
    • ವೈರಲ್ ವಿಡಿಯೋದಿಂದ ಬಯಲಾಯ್ತು ಪಿಎಸ್‌ಐನ ವಿಕೃತ ಕೃತ್ಯ; ಪೋಕ್ಸೋ ಅಡಿಯಲ್ಲಿ ಬಂಧನ

    Recent Comments

    No comments to show.

    Archives

    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.